ಬೆಟ್ಟಿಂಗ್ ಆಡುತ್ತಿದ್ದವ ಬಿದ್ದ ಪೊಲೀಸರ ಗಾಳಕ್ಕೆ

 

 

ಸುದ್ದಿ ಕಣಜ.ಕಾಂ
ಬೆಂಗಳೂರು:  ಐಪಿಎಲ್ ಬೆಟ್ಟಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 4 ಲಕ್ಷ ರೂ. ನಗದು ಮತ್ತು 2 ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ನಗರದ ವರ್ತೂರಿನ ಶಬ್ಬಿರ್ ಖಾನ್(32) ಎಂಬಾತನನ್ನು ಬಂಧಿಸಲಾಗಿದೆ. ಈತ ಮುಂಬೈ ಮತ್ತು ದಿಲ್ಲಿ ತಂಡಗಳ ನಡುವಿನ ಪಂದ್ಯದ ಸೋಲು-ಗೆಲುವಿನ ಬಗ್ಗೆ ಸಾರ್ವಜನಿಕರಿಂದ ಮೊಬೈಲ್ ಮೂಲಕ ಬೆಟ್ಟಿಂಗ್ ಕಟ್ಟಿಸಿಕೊಳ್ಳಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!