ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿಗಳು ತಮ್ಮ ತವರು ಜಿಲ್ಲೆಯ ಕೆಲವು ಪಂಚಾಯಿತಿಗಳಿಗೆ ಮುಂಬಡ್ತಿ ಕೊಡುಗೆ ನೀಡಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ನಡೆದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕೆಲವು ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಲು ನಿರ್ಣಯ ಕೈಗೊಳ್ಳಲಾಗಿದೆ. ಸರಕಾರದ ಈ ನಿರ್ಧಾರಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು ಅಭಿನಂದಿಸಿದ್ದಾರೆ.
ಮೇಲ್ದರ್ಜೆಗೇರಿದ ಪಂಚಾಯಿತಿಗಳು: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಅದೇ ರೀತಿ, ಶಿವಮೊಗ್ಗ ತಾಲೂಕಿನ ಹೊಳೆಹೊನ್ನೂರು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಹಾಗೂ ಸೊರಬ ತಾಲೂಕಿನ ಆನವಟ್ಟಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ.