ಸುದ್ದಿ ಕಣಜ.ಕಾಂ
ಶಿವಮೊಗ್ಗ: ಆರೇಳು ತಿಂಗಳಿಂದ ಬೇತಾಳದಂತೆ ಕಾಡುತ್ತಿರುವ ಕೊರೊನಾ ಪ್ರಕರಣ ಜಿಲ್ಲೆಯಲ್ಲಿ ಇಳಿಮುಖವಾಗುತ್ತಿವೆ. ಅದರಲ್ಲೂ ಆರೋಗ್ಯ ಇಲಾಖೆ ಗುರುವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ಹೊಸನಗರದಲ್ಲಿ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ.
ಜಿಲ್ಲೆಯಲ್ಲಿ 39 ಜನರಿಗೆ ಕೊರೊನಾ ಸೋಂಕು ತಗಲಿದ್ದು, 44 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಯಾವ ತಾಲೂಕಿನಲ್ಲಿ ಎಷ್ಟು?: ಶಿವಮೊಗ್ಗದಲ್ಲಿ 14, ಭದ್ರಾವತಿ 2, ಶಿಕಾರಿಪುರ 5, ತೀರ್ಥಹಳ್ಳಿ 5, ಸೊರಬ 2, ಸಾಗರ 9 ಹಾಗೂ ಇತರೆ ಜಿಲ್ಲೆಗಳಿಂದ ಶಿವಮೊಗ್ಗಕ್ಕೆ ಬಂದಿದ್ದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿದೆ.