ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ ಮಾರ್ಗಸೂಚಿ ಅನ್ವಯ ಮೂರು ದಿನಗಳ ರಾಜ್ಯದಲ್ಲಿ ಪಟಾಕಿ ಮಾರಾಟ ಮಾಡಲು ಅವಕಾಶ ನೀಡಿದೆ.
ಅದರನ್ವಯ ಪ್ರತಿ ವರ್ಷದಂತೆ ಈ ಸಲವೂ ಶಿವಮೊಗ್ಗದ ನೆಹರೂ ಕ್ರೀಡಾಂಗಣ ಮತ್ತು ಸೈನ್ಸ್ ಫೀಲ್ಡ್ ನಲ್ಲಿ ಪಟಾಕಿ ಮಾರಾಟ ಮಾಡುವುದಕ್ಕೆ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯಿಂದ ಅವಕಾಶ ನೀಡಲಾಗಿದೆ.
ಮಾರಾಟ ವೇಳೆ ಕಡ್ಡಾಯವಾಗಿ ದೈಹಿಕ ಅಂತರ ಕಾಪಾಡಬೇಕು. ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಜಾಗರೂಕತೆ ವಹಿಸಬೇಕೆಂದು ಜಿಲ್ಲಾಡಳಿತ ಕೋರಿದೆ.