ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋವಿಡ್’ನಿಂದಾಗಿ ಜನ ಸಂಕಷ್ಟದಲ್ಲಿರುವಾಗ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೀಗಾಗಿ, ಕೂಡಲೇ ಈ ನಿರ್ಧಾರ ಕೈಬಿಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ನ.1ರಿಂದ ವಿದ್ಯುತ್ ದರ ಪರಿಷ್ಕರಿಸಿ ಸರಾಸರಿ ಶೇ.5.4ರಂತೆ (ಯುನಿಟ್ಗೆ 40 ಪೈಸೆ) ಹೆಚ್ಚಿಸಿದೆ ಎಂದು ಆರೋಪಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಪಾಲಿಕೆ ಸದಸ್ಯರಾದ ರಮೇಶ್ ಹೆಗಡೆ, ಎಚ್.ಸಿ.ಯೋಗೀಶ್, ಯಮುನಾ ರಂಗೇಗೌಡ, ಮೆಹಕ್ ಷರೀಫ್ ಸೇರಿ ಹಲವರು ಪಾಲ್ಗೊಂಡಿದ್ದರು.