ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯ ಮತದಾರರ ಚೀಟಿಗಳ ಸಂಕ್ಷಿಪ್ತ ಪರಿಷ್ಕರಣೆ ಮಾಡಲಾಗುತ್ತಿದೆ. ಈ ಕಾರ್ಯ ನವೆಂಬರ್ 22ರಿಂದ ಡಿಸೆಂಬರ್ 13ರ ವರೆಗೆ ನಡೆಯಲಿದೆ.
ಪ್ರತಿ ಭಾನುವಾರದಂದು ಪರಿಷ್ಕರಣೆ ಕಾರ್ಯ ನಡೆಯಲಿದೆ. ಇದಕ್ಕಾಗಿ, ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ, ನಿಗದಿತ ನಮೂನೆ ಅರ್ಜಿ ಸಲ್ಲಿಸಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ಎಸ್.ವಟಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಭಾವಚಿತ್ರ ಹೊಂದಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಯಲಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ತೆಗೆದು ಹಾಕುವುದಕ್ಕೆ ಸಂಬಂಧಿಸಿದಂತೆ ಸಂಪರ್ಕಿಸಲು ಕೋರಲಾಗಿದೆ.