ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲೂಕಿನ ಕುಂಚೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸಿದವರು ತನ್ನ ಅವಧಿಯಲ್ಲಿ ಭ್ರಷ್ಟಾಚಾರ ಎಸಗಿರುವುದಾಗಿ ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ.
ಸೋಮವಾರ ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘದ ಪದಾಧಿಕಾರಿಗಳು ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈಗ ಆ ಅಧಿಕಾರಿ ಬೀರನಹಳ್ಳಿ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಮಾನತುಗೊಳಿಸುವಂತೆ ಒತ್ತಾಯಿಸಿದ್ದಾರೆ.
ವಿದ್ಯಾರ್ಥಿ ಸಂಘಟನೆ ಮುಖಂಡರಾದ ವಿನಯ್ ಕೆ.ಸಿ.ರಾಜಾವತ್, ವೆಂಕಟೇಶ್ ನಾಯ್ಕ, ಮಂಜಾ ನಾಯ್ಕ, ಗಿರೀಶ್, ದಿನೇಶ್ ಉಪಸ್ಥಿತರಿದ್ದರು.