ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬೆಂಗಳೂರು ಭೂ ಸೇನೆ ನೇಮಕಾತಿ ಕೇಂದ್ರವು ಡಿಸೆಂಬರ್ 15 ರಿಂದ 23ರ ವರೆಗೆ ಬೆಂಗಳೂರಿನ ಜಯನಗರದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳ ನೇಮಕಾತಿ ರ್ಯಾಲಿಯನ್ನು ಆಯೋಜಿಸಿದೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25596517, ನಿರ್ದೇಶಕರು ಭೂ ಸೇನೆ ನೇಮಕಾತಿ ಕೇಂದ್ರ, ಬೆಂಗಳೂರು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.