ಕುವೆಂಪು ವಿವಿಗೆ ಮತ್ತೊಂದು ಗಿಫ್ಟ್ ಕೊಟ್ಟ ಸಿಎಂ, ಶಿವಮೊಗ್ಗಕ್ಕೆ ಬರಲಿದೆ ಸೈನ್ಸ್ ಲ್ಯಾಬ್..

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುವೆಂಪು ವಿಶ್ವವಿದ್ಯಾಲಯಕ್ಕೆ ಭಾನುವಾರ ಮತ್ತೊಂದು ಗಿಫ್ಟ್ ಕೊಟ್ಟಿದ್ದಾರೆ.
ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿಸ್ತರಣ ಕಟ್ಟಡ, ಸಹ್ಯಾದ್ರಿ ಕಲಾ ಕಾಲೇಜು ಪ್ರವೇಶ ದ್ವಾರ ಮತ್ತು ಹಾಸ್ಟೆಲ್ ವಿಸ್ತರಣ ಕಟ್ಟಡ ಉದ್ಘಾಟಿಸುವುಕ್ಕಾಗಿ ಭಾನುವಾರ ಆಗಮಿಸಿದ್ದ ಮುಖ್ಯಮಂತ್ರಿಗಳಿಗೆ ವಿಶ್ವವಿದ್ಯಾಲಯದಿಂದ ಬೇಡಿಕೆಗಳನ್ನು ಇಡಲಾಗಿತ್ತು. ಅದಕ್ಕೆ ಸ್ಪಂದಿಸಿದ ಯಡಿಯೂರಪ್ಪ ಅವರು, ತಕ್ಷಣ ಒಂದು ಕೋಟಿ ರೂ. ಬಿಡುಗಡೆ ಮಾಡುವ ಭರವಸೆ ನೀಡಿದರು. ಇನ್ನೂ ಹೆಚ್ಚುವ ಅನುದಾನವನ್ನು ಬಜೆಟ್ ಬಳಿಕ ಮಂಜೂರು ಮಾಡುವುದಾಗಿ ಹೇಳಿದರು.
ಶಿವಮೊಗ್ಗಕ್ಕೆ ಶೀಘ್ರವೇ ಬರಲಿದೆ ವಿಜ್ಞಾನ ಪ್ರಯೋಗಾಲಯ, ಒಳಾಂಗಣ ಕ್ರೀಡಾಂಗಣ: ಶಿವಮೊಗ್ಗಕ್ಕೆ ಕೇಂದ್ರ ಸರ್ಕಾರ ವಿಜ್ಞಾನ ಪ್ರಯೋಗಾಲಯ ಮಂಜೂರು ಮಾಡಿದೆ. ಜತೆಗೆ, ಸಹ್ಯಾದ್ರಿ ಕಾಲೇಜಿನಲ್ಲಿ ಒಳಾಂಗಣ ಕ್ರೀಡಾಂಗಣ ಮಂಜೂರು ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ,ಶಾಸಕರಾದ ಆರಗ ಜ್ಞಾನೇಂದ್ರ, ಆರ್.ಪ್ರಸನ್ನಕುಮಾರ್, ಎಸ್.ರುದ್ರೇಗೌಡ, ಎಂಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಅಧ್ಯಕ್ಷ ಡಿ.ಎಸ್.ಅರುಣ್ ಕುಮಾರ್, ಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರುಳೀಧರ್, ಭದ್ರಾ-ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ, ಕುಲಸಚಿವ ಪ್ರೊ.ಎಸ್.ಎಸ್.ಪಾಟೀಲ್, ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಆರ್. ಶಶಿರೇಖಾ, ಡಾ.ಎಚ್.ಎಂ.ವಾಗ್ದೇವಿ, ಡಾ.ಕೆ.ಬಿ. ಧನಂಜಯ್, ಡಿಸಿ ಕೆ.ಬಿ.ಶಿವಕುಮಾರ್, ಎಸ್.ಪಿ. ಕೆ.ಎಂ.ಶಾಂತರಾಜು ಸೇರಿದಂತೆ ಕಾಲೇಜು ಸಿಬ್ಬಂದಿ, ವಿವಿ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!