ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನ.8ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ.
ಯಡಿಯೂರಪ್ಪ ಅವರು ಅಂದು ಬೆಳಗ್ಗೆ 8.30ಕ್ಕೆ ಬೆಂಗಳೂರಿನಿಂದ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಬರಲಿದ್ದಾರೆ. ನಂತರ 10ಕ್ಕೆ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3.30ಕ್ಕೆ ಸರ್ಕ್ಯೂಟ್ ಹೌಸ್’ನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.