ದೌರ್ಜನ್ಯ ತಡೆ ಕಾಯ್ದೆ ಶಿಕ್ಷೆ ಪ್ರಮಾಣ ಹೆಚ್ಚಿಸಲು ಸಿಎಂ ಫಾರ್ಮುಲಾ ಏನು ಗೊತ್ತಾ?

 

 

ಸುದ್ದಿ ಕಣಜ.ಕಾಂ
ಬೆಂಗಳೂರು: ಕರ್ನಾಟಕದಲ್ಲಿ ದೌರ್ಜನ್ಯ ಕಾಯ್ದೆ ಅಡಿ ದಾಖಲಾಗುವ ಪ್ರಕರಣಗಳಲ್ಲಿ ಶೇ.5-6ರಷ್ಟಕ್ಕೆ ಮಾತ್ರ ಶಿಕ್ಷೆ
ಆಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯು ಬೆಂಗಳೂರಿನಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ ಅಡಿ ಬುಧವಾರ ಏರ್ಪಡಿಸಿದ್ದ ರಾಜ್ಯಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯಲ್ಲಿ ಮಾತನಾಡಿದರು.
ಶಿಕ್ಷೆಯ ಪ್ರಮಾಣ ಏರಿಕೆ ಆಗುವ ನಿಟ್ಟಿನಲ್ಲಿ ವ್ಯಾಜ್ಯ ಮತ್ತು ಅಭಿಯೋಗ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಬೇಕೆಂದು ಎಂದು ತಾಕೀತು ಮಾಡಿದರು.
ಸಭೆಯಲ್ಲಿ ಸಚಿವ ಬಿ.ಶ್ರೀರಾಮುಲು, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಇತರರು ಉಪಸ್ಥಿತರಿದ್ದರು.

ಬಿಎಸ್.ವೈ ನೀಡಿದ ಫಾರ್ಮುಲಾ

  • ಎಲ್ಲ ಪೊಲೀಸ್ ಅಧಿಕಾರಿಗಳು ದೌರ್ಜನ್ಯ ಪ್ರಕರಣಗಳಲ್ಲಿ ಎಫ್.ಐ.ಆರ್. ದಾಖಲಿಸಬೇಕು. ಸಂಬAಧಿಸಿದ ಸೆಕ್ಷನ್‌ಗಳನ್ನು ಅನುಮೋದಿಸಬೇಕು.
  • ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿಗಳಿಂದ 60 ದಿನಗಳೊಳಗೆ ತನಿಖೆ ಮುಗಿಸಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು.
  • ವಿಚಾರಣೆಯಲ್ಲಿ ಯಾವುದೇ ಲೋಪ ಆಗದಂತೆ ಜಾಗರೂಕತೆ ವಹಿಸಬೇಕು. ಸಾಕ್ಷಿದಾರರು ಮತ್ತು ಸಂತ್ರಸ್ತರಿಗೆ ಸೂಕ್ತ ರಕ್ಷಣೆ ನೀಡಬೇಕು.
  • ಎಸ್.ಸಿ., ಎಸ್.ಟಿ. ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ದೂರು ಸಲ್ಲಿಸುವ ಸಂದರ್ಭವÀÆ್ನ ವಿಡಿಯೋ ರೆಕಾರ್ಡಿಂಗ್ ಮಾಡಲು ಕ್ರಮ ವಹಿಸಬೇಕು.
  • ಪ್ರಸ್ತುತ ದೌರ್ಜನ್ಯ ಪ್ರತಿಬಂಧ ನಿಯಮದ ಅಡಿ ದಾಖಲಾಗುವ ಪ್ರಕರಣಗಳಲ್ಲಿ ಪಂಚನಾಮೆ ಮತ್ತು ಸಾಕ್ಷಿಗಳ ಹೇಳಿಕೆ ದಾಖಲಿಸುವಾಗ ವಿಡಿಯೋ ರೆಕಾರ್ಡಿಂಗ್ ನಡೆಸಲಾಗುತ್ತಿದೆ. ದೂರು ಸಲ್ಲಿಸಲು ಬಂದ ಸಂತ್ರಸ್ತರ ಹಾದಿ ತಪ್ಪಿಸುವ ಸಾಧ್ಯತೆಗಳನ್ನು ತಪ್ಪಿಸಲು ದೂರು ನೀಡುವಾಗಲೂ ವಿಡಿಯೋ ರೆಕಾರ್ಡಿಂಗ್ ನಡೆಸುವಂತೆ ಎಲ್ಲ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಬೇಕು.
  • ಪರಿಶಿಷ್ಟ ಜಾತಿ, ಪಂಗಡಗಳ ಕಾಲೊನಿ, ತಾಂಡಾಗಳಲ್ಲಿ ಕನಿಷ್ಠ 100 ಪಡಿತರ ಚೀಟಿದಾರರು ಇದ್ದಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಸ್ಥಾಪಿಸಿ.

Leave a Reply

Your email address will not be published. Required fields are marked *

error: Content is protected !!