ಸುದ್ದಿ ಕಣಜ.ಕಾಂ
ಶಿವಮೊಗ್ಗ: ತೀರ್ಥಹಳ್ಳಿ, ಹೊಸನಗರದಲ್ಲಿ ಶನಿವಾರ ಯಾವುದೇ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಹೊಸದಾಗಿ 18 ಜನರಿಗೆ ಕೊರೊನಾ ಸೋಂಕು ತಗಲಿದೆ. 20 ಜನ ಬಿಡುಗಡೆಯಾಗಿದ್ದಾರೆ. ಇಂದೂ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 348 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ.
1699 ಜನರ ಗಂಟಲಿನ ದ್ರವ ಸಂಗ್ರಹಿಸಿದ್ದು, 1526 ನೆಗೆಟಿವ್ ಬಂದಿವೆ. ಸೋಂಕು ಕಂಡುಬಂದು ಆರೋಗ್ಯ ತೀವ್ರ ಸಮಸ್ಯೆ ಇರುವವರನ್ನು ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ ದಾಖಲಿಸಲಾಗಿದೆ. 58 ಜನ ಇಲ್ಲಿದ್ದಾರೆ. ಅದೇ ರೀತಿ, ಖಾಸಗಿ ಆಸ್ಪತ್ರೆಯಲ್ಲಿ 18, ಸಿಸಿಸಿನಲ್ಲಿ 0, ಮನೆಯಲ್ಲಿ 61 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. 137 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.
ತಾಲೂಕುವಾರು ವರದಿ: ಶಿವಮೊಗ್ಗ8, ಭದ್ರಾವತಿ 4, ಶಿಕಾರಿಪುರ 2, ಸೊರಬ 3, ಸಾಗರ 3 ಪ್ರಕರಣ ದೃಢಪಟ್ಟಿವೆ.