ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕಾಲೇಜು ಪುನರಾರಂಭಿಸಿ ಬೆನ್ನಲ್ಲೇ ಎರಡು ದಿನಗಳ ಹಿಂದೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೇರಿ ಒಟ್ಟು 28 ಜನರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿತ್ತು. ಈಗ ಮತ್ತೆ ಐವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಶುಕ್ರವಾರ ಬಿಡುಗಡೆ ಮಾಡಿರುವ ತಾಲೂಕುವಾರು ಪದವಿ ಕಾಲೇಜುಗಳ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ವಿವರದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.
ಶಿವಮೊಗ್ಗ ತಾಲೂಕಿನಲ್ಲಿ ಇದುವರೆಗೆ 23 ಪಾಸಿಟಿವ್ ಪ್ರಕರಣ ಪತ್ತೆಯಾದರೆ, ಭದ್ರಾವತಿಯಲ್ಲಿ 8, ಸಾಗರದಲ್ಲಿ 2 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇನ್ನುಳಿದ ಎಲ್ಲ ತಾಲೂಕುಗಳಲ್ಲಿ ಯಾವುದೇ ವಿದ್ಯಾರ್ಥಿ, ಸಿಬ್ಬಂದಿಯಲ್ಲಿ ಕಾಯಿಲೆ ಪತ್ತೆಯಾಗಿಲ್ಲ.
ಇದುವರೆಗೆ ಜಿಲ್ಲೆಯಲ್ಲಿ 7304 ವಿದ್ಯಾರ್ಥಿಗಳು ಮತ್ತು 1691 ಸಿಬ್ಬಂದಿಯ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ.