ಶಿವಮೊಗ್ಗ: ತಿಲಕ್ ನಗರ ಮುಖ್ಯ ರಸ್ತೆಯ ವಿಶ್ವೇಶ್ವರಯ್ಯ ಕಾಂಪ್ಲೆಕ್ಸ್ನಲ್ಲಿರುವ ಮೊಬೈಲ್ ಅಂಗಡಿಯಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್’ನಲ್ಲಿ ತೊಡಗಿದ್ದ ಮೂವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 2.21 ಲಕ್ಷ ರೂ. ಹಾಗೂ 3 ಮೊಬೈಲ್ ಫೋನ್’ಗಳನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.
ಬಂಧಿತರು ಯಾರು?
ಮೊಬೈಲ್ ಅಂಗಡಿ ಮಾಲೀಕ ಶಾಂತಿನಗರದ ನಿವಾಸಿ ಅಜೇಯ್ (35), ಫೈನ್ಯಾನ್ಸ್ ಕೆಲಸ ಮಾಡಿಕೊಂಡಿದ್ದ ಗೋಪಾಳ ನಿವಾಸಿ ಕಿರಣ್ (32), ಮೊಬೈಲ್ ಅಂಗಡಿ ಕೆಲಸಗಾರ ರಾಗಿಗುಡ್ಡ ನಿವಾಸಿ ಸಂದೀಪ್ (28) ಬಂಧಿತರು.