ಶಿವಮೊಗ್ಗ: ನಗರದ ನೆಹರೂ ಸ್ಟೇಡಿಯಂನಲ್ಲಿ ನವೆಂಬರ್ 11ರಂದು ನಡೆಸಲು ಉದ್ದೇಶಿಸಲಾಗಿದ್ದ ಇಟಿ ಮತ್ತು ಪಿಎಸ್ಟಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಎಸ್ಪಿ ಕೆ.ಎಂ. ಶಾಂತರಾಜು ಪ್ರಕಟಣೆಯಲ್ಲಿ ಹೇಳಿದ್ದಾರೆ.
2020-21ನೇ ಸಾಲಿನ ಜಿಲ್ಲೆಯಲ್ಲಿ ಖಾಲಿ ಇರುವ 50 ನಾಗರಿಕ ಪೊಲೀಸ್ ಕಾನ್ಸ್ ಟೆಬಲ್ ಹುದ್ದೆಗಳ ನೇಮಕಾತಿ ಸಂಬoಧ ಸೆಪ್ಟೆಂಬರ್ 20ರಂದು ಲಿಖಿತ ಪರೀಕ್ಷೆ ನಡೆಸಿದ್ದು, ಈ ಪರೀಕ್ಷೆಯಲ್ಲಿ ಗಳಿಸಿರುವ ಅಂಕದ ಆಧಾರದ ಮೇಲೆ 1;5ರಡಿ ಅರ್ಹರಿಗೆ ನವೆಂಬರ್ 11ರಂದು ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಆಡಳಿತಾತ್ಮಕ ಕಾರಣಗಳಿಂದಾಗಿ ಪರೀಕ್ಷೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.