ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ, ವಿಧಾನ ಸಭೆಯ ವಿರೋಧ ಪಕ್ಷ ನಾಯಕ ಸಿದ್ಧರಾಮಯ್ಯ ಅವರು ನವೆಂಬರ್ 8ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.
ಭಾನುವಾರ ಬೆಳಗ್ಗೆ10-30ಕ್ಕೆ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೊರಟು ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗ ನಗರಕ್ಕೆ 11.30ಕ್ಕೆ ಆಗಮಿಸುವರು. ಅಂದು ನಡೆಯಲಿರುವ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 3.30 ಹೆಲಿಕ್ಯಾಪ್ಟರ್’ನಲ್ಲಿ ಶಿವಮೊಗ್ಗದಿಂದ ನಿರ್ಗಮಿಸಲ್ಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.