ಸಮಿತಿ ಕೈಬಿಡಲು ಸರ್ಕಾರಕ್ಕೆ 15 ದಿನಗಳ ಡೆಡ್ ಲೈನ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಜಿಲ್ಲಾಡಳಿತದಿಂದ ನೇಮಿಸಲಾಗಿರುವ ಮೇಲುಸ್ತುವಾರಿ ಸಮಿತಿಯನ್ನು 15 ದಿನಗಳಲ್ಲಿ ರದ್ದುಗೊಳಿಸಬೇಕು ಎಂದು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಹೇಳಿದರು.
ನಗರದ ಆರ್ಯ ಈಡಿಗರ ಸಂಘದಿAದ ಸಮುದಾಯ ಭವನದಲ್ಲಿ ಸೋಮವಾರ ಸಂಜೆ ನಡೆದ ಹೋರಾಟ ಪೂರ್ವ ಸಿದ್ಧತಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಒಂದುವೇಳೆ, ನೀಡಿರುವ ಡೆಡ್ ಲೈನ್ ಒಳಗೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳದಿದ್ದರೆ ಈಡಿಗರ ಸ್ವಾಮೀಜಿಗಳ ನೇತೃತ್ವದಲ್ಲಿ ಜಾತ್ಯತೀಯ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ
ಮಾಜಿ ಶಾಸಕ ಮಧು ಬಂಗಾರಪ್ಪ ಮಾತನಾಡಿ, ಸರ್ಕಾರ ನಿರ್ಧಾರವನ್ನು ಬದಲಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಉಗ್ರ ಸ್ವರೂಪದ ಹೋರಾಟ ಮಾಡಲಾಗುವುದು ಎಂದು ಖಡಕ್ ವಾರ್ನಿಂಗ್ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ, ಸ್ವರಾಜ್ ಇಂಡಿಯಾದ ವಕ್ತಾರ ಕೆ.ಪಿ. ಶ್ರೀಪಾಲ್, ಮಾಜಿ ಶಾಸಕ ಜಿ.ಡಿ. ನಾರಾಯಣಪ್ಪ, ಸೈದಪ್ಪ ಗುತ್ತೇದಾರ್, ಎಂ.ಗುರುಮೂರ್ತಿ, ಸತ್ಯಜೀತ್ ಸೂರತ್ಕಲ್ ಸೇರಿ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!