ಸುದ್ದಿ ಕಣಜ.ಕಾಂ
ಶಿವಮೊಗ್ಗ: ಅನಂತ ಹೆಗಡೆ ಆಶೀಸರ ಅವರು ನಿಜವಾಗಿಯೂ ಪರಿಸರವಾದಿಗಳಾಗಿದ್ದರೆ, ಜೀವ ವೈವಿಧ್ಯ ಸಂರಕ್ಷಣ ಕಾರ್ಯಪಡೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಪರಿಸರ ಹೋರಾಟಕ್ಕೆ ಕೈಜೋಡಿಸಲಿ ಎಂದು ನಮ್ಮೂರಿಗೆ ಅಕೇಶಿಯಾ ಬೇಡ ಹೋರಾಟ ಸಮಿತಿ ಸಂಚಾಲಕ ಕೆ.ಪಿ.ಶ್ರೀಪಾಲ್ ಹೇಳಿದರು.
ಎಂಪಿಎಂ ಅರಣ್ಯ ಖಾಸಗೀಕರಣದ ಬಗ್ಗೆ ಇಷ್ಟೊಂದು ದೊಡ್ಡ ಪ್ರಮಾಣದ ವಿರೋಧ ವ್ಯಕ್ತವಾಗುತ್ತಿದೆ. ಆದರೆ, ಆಶೀಸರ ಅವರು ಮುಖ್ಯಮಂತ್ರಿಗಳ ಮೇಲೆ ಈ ಬಗ್ಗೆ ಒತ್ತಡ ಹೇರುವಲ್ಲಿ ವಿಫಲರಾಗಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಸಿಎಂ ಕುಟುಂಬದವರ ಒಲವು: ಎಂಪಿಎಂಗೆ ಲೀಸ್ ನೀಡಲಾಗಿದ್ದ ಅರಣ್ಯ ಭೂಮಿಯನ್ನು ಖಾಸಗಿಯವರಿಗೆ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ವಿಶೇಷ ಆಸಕ್ತಿ ತೋರುತ್ತಿದ್ದಾರೆ ಎಂದು ಶ್ರೀಪಾಲ್ ಆರೋಪಿಸಿದರು.
ರಾಜ್ಯ ರೈತ ಸಂಘದ ಮುಖಂಡ ಕೆ.ಟಿ. ಗಂಗಾಧರ್, ಪ್ರೊ.ರಾಜೇಂದ್ರ ಚೆನ್ನಿ, ಗುರುಮೂರ್ತಿ, ಶೇಖರ್ ಗೌಳೇರ್, ಕೃಷ್ಣಮೂರ್ತಿ ಹಿಳ್ಳೋಡಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.