ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಕ್ಕಳ ಅಶ್ಲೀಲ ವಿಡಿಯೋ ಫಾರ್ವರ್ಡ್ ಮಾಡಿದ ವ್ಯಕ್ತಿಯೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.
ಶಿವಮೊಗ್ಗದ ಶಿವಪುರ ತಾಂಡಾದ ರಘು ಡಿ. ಬಿನ್ ದೇವಿರಾನಾಯ್ಕ (25) ಬಂಧಿತ ಆರೋಪಿ.
ಸಿಕ್ಕಿಬಿದ್ದಿದ್ದು ಹೇಗೆ?
ಸೈಬರ್ ಟಿಪ್ ಲೈನ್ ನಿಂದ ಬಂದ ಮಾಹಿತಿ ಮೇರೆಗೆ ಫೇಸ್ ಬುಕ್ ಮೆಸೆಂಜರ್ ಮೂಲಕ ಮಕ್ಕಳ ಅಶ್ಲೀಲ ವೀಡಿಯೋ ಫಾರ್ವರ್ಡ್ ಮಾಡುತ್ತಿದ ಈತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ವಿರುದ್ಧ ಕಲಂ 67 (ಬಿ) ಐಟಿ ಕಾಯ್ದೆಯಂತೆ ಶಿವಮೊಗ್ಗದ ಸಿ.ಇ.ಎನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.