ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಹೆಲಿಪ್ಯಾಡ್’ನಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶೀಘ್ರವೇ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳು ದೂರವಾಗಲಿವೆ. ನ್ಯಾಯಯುತವಾದ ಪರಿಹಾರ ಸಿಗಲಿದೆ ಎಂದು ಭರವಸೆ ನೀಡಿದರು.
ಹಲವು ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಶರಾವತಿ ಸಂತ್ರಸ್ತರ ಸಮಸ್ಯೆ ಆದಷ್ಟು ಬೇಗನೇ ಪರಿಹರಿಸುವ ನಿಟ್ಟಿನಲ್ಲಿ ಶಾಸಕರೊಂದಿಗೆ ಸಭೆ ನಡೆಸಲಾಗಿದೆ, ಎಂದು ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ ಸೇರಿ ಪಕ್ಮಷದ ಮುಖಂಡರು ಉಪಸ್ಥಿತರಿದ್ದರು.