ಉದ್ಯಾನಗಳ ನಿರ್ವಹಣೆ ಹೊರಗುತ್ತಿಗೆ ಸಿಬ್ಬಂದಿ, ಪ್ರಸ್ತಾವನೆಗೆ ಸೂಚನೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಲಾಗಿರುವ ಉದ್ಯಾನಗಳ ನಿರ್ವಹಣೆಗಾಗಿ ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡುವ ಕುರಿತು ಅನುಮೋದನೆಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೆಲ್ವಕುಮಾರ್ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಹಾಗೂ ಸಮಸ್ಯೆಗಳ ಬಗ್ಗೆ ಸಮಾಲೋಚನೆ ಸಭೆ ನಡೆಸಿ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಕಾಮಗಾರಿಗಳ ಕುರಿತು ಪೂರ್ಣ ಮಾಹಿತಿ ಪಡೆದರು.
ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಮಾತನಾಡಿ, ಡಿಸೆಂಬರ್ ಅಂತ್ಯದೊಳಗೆ ಈಗಾಗಲೇ ಕೈಗೆತ್ತಿಕೊಂಡಿರುವ 40 ಕಾಮಗಾರಿಗಳು ಪೂರ್ಣಗೊಳ್ಳಲಿದ್ದು, ನಿಗದಿಯಂತೆ 2022ರ ಜೂನ್ ತಿಂಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಪೂರ್ಣಗೊಳ್ಳಲಿದೆ ಎಂದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್‌ಪಿ ಕೆ.ಎಂ.ಶಾAತಕುಮಾರ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕ್ವಿಕ್ ನ್ಯೂಸ್ ಪಾಯಿಂಟ್

  1. ಅಮೃತ್ ಯೋಜನೆಯಡಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ 15 ಮಳೆ ನೀರು ಚರಂಡಿ ಕಾಮಗಾರಿ ಮುಂದಿನ ಮಾರ್ಚ್ ಒಳಗಾಗಿ ಪೂರ್ಣಗೊಳಿಸಬೇಕು.
  2. ಮೆಸ್ಕಾಂ, ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಿ.
  3. ವಿದ್ಯುತ್ ಲೈನ್ ಮತ್ತು ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿ ಪೂರ್ಣಗೊಂಡಿರುವ ಕಡೆಗಳಲ್ಲಿ ತಕ್ಷಣ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಿ.  ಸಾರ್ವಜನಿಕರಿಗೆ ಆಗುವ ಅನಾನುಕೂಲತೆ ತಪ್ಪಿಸಿ.
  4. 94ಸಿ ಮತ್ತು 94ಸಿಸಿ ಅಡಿಯಲ್ಲಿ ಸ್ವೀಕರಿಸಲಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ.

Leave a Reply

Your email address will not be published. Required fields are marked *

error: Content is protected !!