ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ತನ್ನ ಕಬಂಧಬಾಹುಗಳನ್ನು ಚಾಚಲು ಆರಂಭಿಸಿದ ದಿನದಿಂದ ಶಿವಮೊಗ್ಗ ಮತ್ತು ಶಿಕಾರಿಪುರದಲ್ಲಿ ಉಳಿದ ತಾಲೂಕುಗಳಿಗಿಂತ ಹೆಚ್ಚು ಪ್ರಕರಣಗಳು ದೃಢಪಟ್ಟಿದ್ದವು. ಆದರೆ, ಆರೋಗ್ಯ ಇಲಾಖೆ ಶುಕ್ರವರ ಬಿಡುಗಡೆ ಮಾಡಿರುವ ವರದಿಯಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಜತೆಗೆ, ಇಂದು ಯಾವುದೇ ಸಾವು ಸಹ ಸಂಭವಿಸಿಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ 53 ಹೊಸ ಪ್ರಕರಣಗಳು ದೃಢಪಟ್ಟಿದ್ದು, 57 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಯಾವ ತಾಲೂಕಿನಲ್ಲಿ ಎಷ್ಟು: ಶಿವಮೊಗ್ಗ 18, ಭದ್ರಾವತಿ 19, ಶಿಕಾರಿಪುರ 00, ತೀರ್ಥಹಳ್ಳಿ 3, ಸೊರಬ 3, ಸಾಗರ 8, ಹೊಸನಗರ 2.