ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಪೆಸಿಟ್ ಕಾಲೇಜಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸರ್ಕಾರಿ ನೌಕರರೆಂದು ಪರಿಗಣಿಸುವ ಬಗ್ಗೆ ಈಶ್ವರಪ್ಪ ಸ್ಪಷ್ಟನೆ
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಜನವರಿ 2 ಮತ್ತು 3ರಂದು ಸಭೆ ನಡೆಯಲಿದೆ.
ಕಾರ್ಯಕಾರಿಣಿ ಸಭೆಯಲ್ಲಿ ಕೇವಲ 150 ಮುಖಂಡರು ಮಾತ್ರ ಪಾಲ್ಗೊಳ್ಳಲ್ಲಿದ್ದಾರೆ ಎಂದು ತಿಳಿಸಿದರು.
ರಾಜಕೀಯವಾಗಿ ಪ್ರಮುಖ ನಿರ್ಧಾರ: ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದ್ದು, ಪ್ರಮುಖ ನಿರ್ಧಾರ ಕೈಗೊಳ್ಳಲ್ಲಿದ್ದೇವೆ. ರಾಜ್ಯದ ರಾಜಕಾರಣದಲ್ಲಿ ಈ ಸಭೆ ಹೊಸ ತಿರುವು ಸಿಗಲಿದೆ ಎಂದು ಮಾಹಿತಿ ನೀಡಿದರು.
ಬಿಜೆಪಿ ಮುಖಂಡರಾದ ಎಂ.ಬಿ.ಭಾನುಪ್ರಕಾಶ್, ಎಸ್.ಎನ್ ಚನ್ನಬಸಪ್ಪ, ಶಿವರಾಜ್, ಅಣ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.