ಸುದ್ದಿ ಕಣಜ.ಕಾಂ
ಶಿವಮೊಗ್ಗ: ಡಿಸೆಂಬರ್ 30ರಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ರಸ್ತೆಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಪ್ರಸಕ್ತ ಸಾಲಿನ ಅಂತಿಮ ತ್ರೈಮಾಸಿಕ ಅಂಚೆ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಡಿಸೆಂಬರ್ 29ರೊಳಗಾಗಿ ಸಲ್ಲಿಸುವಂತೆ ಅಥವಾ ಅದಾಲತ್ನಲ್ಲಿ ಖುದ್ದಾಗಿ ಭಾಗವಹಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಶಿವಮೊಗ್ಗ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.