ಮಾಜಿ ಸೈನಿಕರಿಗೆ ಪೆಟ್ರೋಲ್ ಬಂಕ್ ತೆರೆಯಲು ಅವಕಾಶ, ಅರ್ಜಿ ಸಲ್ಲಿಸುವ ಕೊನೆ ದಿನ ಯಾವುದು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬಳ್ಳಾರಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಪ್ರಾಂತೀಯ ಕಚೇರಿ ವ್ಯಾಪ್ತಿಯಲ್ಲಿ ಸಿಒಸಿಒ ಅಡಿ ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್ ಬಂಕ್ ತೆರೆಯಲು ಮಾಜಿ ಸೈನಿಕರಿಂದ ಅರ್ಜಿ ಅಹ್ವಾನಿಸಲಾಗಿದೆ.
ಡಿಸೆಂಬರ್ 22ರೊಳಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯನ್ನು ಖುದ್ದಾಗಿ ಇಲ್ಲವೇ ದೂರವಾಣಿ ಸಂಖ್ಯೆ 08182-220925 ಸಂಪರ್ಕಿಸಬಹುದು.

error: Content is protected !!