ಜನವರಿಯಲ್ಲಿ ನಡೆಯಲಿದೆ ಬಿಜೆಪಿಯ ಮಹತ್ವದ ಸಭೆ, ಇದು ಪಕ್ಷದಲ್ಲಿ ತರಲಿದೆ ದೊಡ್ಡ ತಿರುವು

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬಹಳ ವರ್ಷಗಳ ನಂತರ ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ಸಮಿತಿ ಸಭೆ ನಡೆಯಲಿದೆ. ಇದು ಪಕ್ಷಕ್ಕೆ ಬಹುದೊಡ್ಡ ತಿರುವು ನೀಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಜನವರಿ 2 ಮತ್ತು 3ರಂದು ಪೆಸಿಟ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಇದು ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳ ಮಾರ್ಗಸೂಚಿ ಆಗಲಿದೆ ಎಂದು ತಿಳಿಸಿದರು.

error: Content is protected !!