ಬೊಮ್ಮನಕಟ್ಟೆ ಅತಿಕ್ರಮಣದ ವಿರುದ್ಧ ಸಮರ ಸಾರಿದ ಜಿಲ್ಲಾಡಳಿತ, ಡಿಸಿ ನೀಡಿದ ನಿರ್ದೇಶನವೇನು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲು ಇಟ್ಟಿರುವ ನಿವೇಶನವನ್ನು ಅತಿಕ್ರಮಣ ಮಾಡಿರುವವರ ವಿರುದ್ಧ ಜಿಲ್ಲಾಡಳಿತ ಸಮರ ಸಾರಿದೆ.

ಗುರುವಾರದಿಂದ ತೆರವು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದು, ಶೀಘ್ರ ಈ ಎಲ್ಲ ಕೆಲಸ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದೂರುಗಳ ಆಧಾರದ ಮೇಲೆ ಪ್ರಕರಣ ಗಂಭೀರ: ಬೊಮ್ಮನಕಟ್ಟೆಯಲ್ಲಿ ಅತಿಕ್ರಮಣ ಮಾಡಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರು ಬಂದ ಹಿನ್ನೆಲೆ ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿ ಭೂ ದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕರಿಗೆ ನೀಡಿದ ಆದೇಶ ಹಿನ್ನೆಲೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ತೆರವಿಗೆ ಮುಂದಾಗಿದ್ದಾರೆ.
ಜಿಲ್ಲಾಧಿಕಾರಿಗಳು ಇದಕ್ಕಾಗಿ ಸಮಿತಿ ರಚಿಸಿದ್ದರು. ಅದು ಸಲ್ಲಿಸಿರುವ ವಿವರಗಳ ಅನ್ವಯ ಮಹಾನಗರ ಪಾಲಿಕೆ ತೆರವು ಕಾರ್ಯಕ್ಕೆ ಮುಂದಾಗಿದೆ.

error: Content is protected !!