ಗ್ರಾಮ ಪಂಚಾಯಿತಿ ಚುನಾವಣೆ, ಎಲ್ಲೆಲ್ಲಿ ನಡೆಯಲಿದೆ ಮತ ಎಣಿಕೆ?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮೊದಲನೇ ಮತ್ತು ಎರಡನೇ ಹಂತದ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಡಿಸೆಂಬರ್ 30ರಂದು ನಡೆಯಲಿದೆ.
ಮೊದಲನೆ ಹಂತದಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ತಾಲೂಕುಗಳ ಗ್ರಾ.ಪಂ.ವ್ಯಾಪ್ತಿಯಲ್ಲಿ ಡಿಸೆಂಬರ್ 22ರಂದು ಹಾಗೂ ಎರಡನೇ ಹಂತದಲ್ಲಿ ಸಾಗರ, ಶಿಕಾರಿಪುರ, ಸೊರಬ ಮತ್ತು ಹೊಸನಗರಗಳ ಗ್ರಾ.ಪಂ.ಗಳಲ್ಲಿ ಡಿಸೆಂಬರ್ 27ರಂದು ಮತದಾನ ಕಾರ್ಯ ನಡೆಯಲಿದೆ.
ಜನವರಿಯಲ್ಲಿ ನಡೆಯಲಿದೆ ಬಿಜೆಪಿಯ ಮಹತ್ವದ ಸಭೆ, ಇದು ಪಕ್ಷದಲ್ಲಿ ತರಲಿದೆ ದೊಡ್ಡ ತಿರುವು
ಮತ ಕೇಂದ್ರ: ಶಿವಮೊಗ್ಗದ ಶ್ರೀ ಎಚ್.ಎಸ್.ರುದ್ರಪ್ಪ ರಾ.ಪ.ಪೂ.ಕಾಲೇಜು, ಭದ್ರಾವತಿಯ ಸಂಚಿ ಹೊನ್ನಮ್ಮ ಬಾಲಕೀಯರ ಕಾಲೇಜು, ತೀರ್ಥಹಳ್ಳಿಯ ಡಾ.ಯು.ಆರ್.ಅನಂತಮೂರ್ತಿ ಸರ್ಕಾರಿ ಪ್ರೌಢ ಶಾಲೆ, ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೊರಬದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಸನಗರದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮತ ಎಣಿಕೆ ನಡೆಯಲಿದೆ.
ಐಟಿಐ ಪರೀಕ್ಷೆಗೆ ಮೇಜರ್ ಸರ್ಜರಿ, ಪರೀಕ್ಷಾ ಪ್ರಾಧಿಕಾರ ನಡೆಸಲಿದೆ ಪರೀಕ್ಷೆ, ಕಾರಣವೇನು?
ನಿಷೇಧಾಜ್ಞೆ ಜಾರಿ: ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕೇಂದ್ರಗಳ ವ್ಯಾಪ್ತಿಯಲ್ಲಿ ಕಲಂ 144 ಅನ್ವಯ ಡಿಸೆಂಬರ್ 30ರ ಬೆಳಗ್ಗೆ 6ರಿಂದ 31ರ ಬೆಳಗ್ಗೆ 6ರ ವರೆಗೆ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಗ್ರಾಪಂ ಚುನಾವಣೆ, ಹೇಗಿತ್ತು ಮಸ್ಟರಿಂಗ್, ಕಲ್ಪಿಸಿದ್ದ ಸೌಲಭ್ಯಗಳೇನು? ಆದ ಗೊಂದಲಗಳೇನು?

ಅನ್ವಯವಾಗುವ ನಿಯಮ

  • ಐದು ಹಾಗೂ ಅದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವಂತಿಲ್ಲ. ಯಾವುದೇ ವಿನಾಶಕಾರಿ ವಸ್ತು, ಸ್ಫೋಟಕ ವಸ್ತು ಅಥವಾ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ. ಪಟಾಕಿಗಳನ್ನು ಸಿಡಿಸುವಂತಿಲ್ಲ.
  • ನಿಷೇಧಾಜ್ಞೆಯು ಶವ ಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಮತ್ತು ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ ಹಾಗೂ ಇನ್ನಿತರ ಸಮಾರಂಭಗಳನ್ನು ನಡೆಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ, ಚುನಾವಣಾ ಕಾರ್ಯಚರಣೆ ಅಧಿಕಾರಿಗಳಿಗೆ, ಚುನಾವಣಾ ಏಜೆಂಟ್‍ರವರೆಗೆ ಅನ್ವಯಿಸದು.
  • ಈ ಅವಧಿಯಲ್ಲಿ ಯಾವುದೇ ಮೆರವಣಿಗೆ, ಸಭೆ, ಸಮಾರಂಭ, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶಗಳನ್ನು ನಡೆಸುವಂತಿಲ್ಲ.

error: Content is protected !!