ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಾಮಾನ್ಯವಾಗಿ ಶಿವಮೊಗ್ಗ ತಾಲೂಕಿನಲ್ಲಿಯೇ ನಿತ್ಯವೂ ಹೆಚ್ಚು ಕೊರೊನಾ ಸೋಂಕು ಕಂಡುಬರುತ್ತಿದ್ದವು. ಆದರೆ, ಸೋಮವಾರ ಶಿಕಾರಿಪುರದಲ್ಲಿ ಉಳಿದ ತಾಲೂಕುಗಳಿಗಿಂತ ಹೆಚ್ಚು ಪ್ರಕರಣ ಕಂಡುಬಂದಿವೆ.
ಶಿಕಾರಿಪುರದಲ್ಲಿ ಐದು ಜನರಿಗೆ ಕೊರೊನಾ ಸೋಂಕು ತಗಲಿದೆ. ಶಿವಮೊಗ್ಗದಲ್ಲಿ 2, ಸಾಗರದಲ್ಲಿ 1 ಪ್ರಕರಣ ಕಂಡುಬಂದಿವೆ. ಇನ್ನುಳಿದ ತಾಲೂಕುಗಳಲ್ಲಿ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ.
ಇಂದು ಶಿವಮೊಗ್ಗ ಜಿಲ್ಲೆಯಲ್ಲಿ 8 ಹೊಸ ಪ್ರಕರಣ ದೃಢಪಟ್ಟಿವೆ. 20 ಜನ ಗುಣಮುಖರಾಗಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 348 ಜನರನ್ನು ಕೊರೊನಾ ಮಹಾಮಾರಿ ಬಲಿ ಪಡೆದಿದೆ.
ಮತ್ತೆ ನೂರರ ಗಡಿಗೆ ಸಕ್ರಿಯೆ ಪ್ರಕರಣ: ಮೆಗ್ಗಾನ್ ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ 26 ಜನ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಕೇವಲ ಮೂವರಿದ್ದು, ಮನೆಯ ಆರೈಕೆಯಲ್ಲಿ 71 ಜನ ಚಿಕಿತ್ಸೆ ಪಡೆಯುತ್ತಿದ್ದು, 100 ಸಕ್ರಿಯ ಪ್ರಕರಣಗಳಿವೆ. ಸೋಮವಾರ 2255 ಮಾದರಿಗಳನ್ನು ಸಂಗ್ರಹ ಮಾಡಲಾಗಿದೆ. 1294 ಜನರ ವರದಿ ನೆಗೆಟಿವ್ ಬಂದಿದೆ.