ಸುದ್ದಿ ಕಣಜ.ಕಾಂ
ಶಿವಮೊಗ್ಗ: ಖಾಸಗಿ ಆಸ್ಪತ್ರೆಗಳಲ್ಲಿ ಭಾನುವಾರದ ವರದಿ ಅನ್ವಯ ಕೇವಲ ಮೂವರು ಕೋವಿಡ್ ಸೋಂಕಿತರು ದಾಖಲಾಗಿದ್ದಾರೆ. ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲೂ 25 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೊಂದು ಆಶಾದಾಯಕ ಬೆಳವಣಿಗೆಯಾಗಿದೆ.
ಭಾನುವಾರದಂದು ಹೊಸದಾಗಿ 13 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 24 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 348 ಜನರನ್ನು ಕೊರೊನಾ ಬಲಿ ಪಡೆದಿದೆ.
ತಾಲೂಕುವಾರು ವರದಿ: ಶಿವಮೊಗ್ಗ 6, ಭದ್ರಾವತಿ 2, ಶಿಕಾರಿಪುರ 2, ಸೊರಬ 1, ಸಾಗರ 1, ಹೊಸನಗರ 1 ಪ್ರಕರಣ ದೃಢಪಟ್ಟಿವೆ.