ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸರ್ಕಾರದ ಸೂಚನೆಯಂತೆ ಕೋವಿಡ್ ಲಸಿಕೆಗಳನ್ನು ಸಂಗ್ರಹಿಸಲು ಆಸ್ಪತ್ರೆಗಳೂ ಸೇರಿದಂತೆ ಒಟ್ಟು 113 ಕೋಲ್ಡ್ ಚೈನ್ಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಪ್ರಥಮ ಹಂತದಲ್ಲಿ ಲಸಿಕೆ ನೀಡಲು ಗುರುತಿಸಲಾಗಿರುವ 12 ಸಾವಿರ ಮಂದಿಯ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.
ಪಾಸಿಟಿವ್ ಸಂಖ್ಯೆ ಶೇ.1ಕ್ಕಿಂತ ಕಡಿಮೆ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಮಾಣ ಶೇ.1ಕ್ಕಿಂತಲೂ ಕಡಿಮೆಯಾಗಿದೆ. ಆದರೂ ಸಾರ್ವಜನಿಕರು ನಿರ್ಲಕ್ಷö್ಯ ವಹಿಸದೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕು ಎಂದು ಸಲಹೆ ನೀಡಿದ್ದಾರೆ.