ಸುದ್ದಿ ಕಣಜ.ಕಾಂ ಶಿವಮೊಗ್ಗ: ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸೊಸೈಟಿಯಲ್ಲಿ ಅರ್ಜಿ ಸಲ್ಲಿಸಿದ ಒಂದು ಗಂಟೆಯೊಳಗೆ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾ ಸರ್ಕಾರಿ ನೌಕರರ ಸಂಘ, ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ, ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಇವುಗಳ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.
ಈ ವರ್ಷ 40 ಕೋಟಿ ರೂಪಾಯಿ ವ್ಯವಹಾರ ನಡೆಸಲಾಗಿದೆ. ನೌಕರರಿಗಾಗಿ 22 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಸಮುದಾಯ ಭವನ ನಿರ್ಮಿಸಲಾಗುತ್ತಿದೆ. ನೌಕರರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.
ಜನವರಿ 1ರಿಂದ ಕೆಜಿಐಡಿ ಸಂಪೂರ್ಣ ಗಣಕೀಕರಣಗೊಳ್ಳಲಿದೆ. ಕೇಂದ್ರದ ಮಾದರಿಯ ವೇತನವನ್ನು ಮುಂದಿನ ದಿನಗಳಲ್ಲಿ ಪಡೆದೇ ಪಡೆಯುತ್ತೇವೆ. ಅಲ್ಲದೆ ಎನ್ಪಿಎಸ್ನ್ನು ರದ್ದುಗೊಳಿಸುವ ನಿಟ್ಟಿಲ್ಲಿ ಸರ್ಕಾರದೊಂದಿಗೆ ಮಾತುಕತೆ ನಡೆದಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಸೌಲಭ್ಯಗಳ ಬಗ್ಗೆ ಕೇಂದ್ರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ಸ್ಮಾಟ್ ಸಿಟಿ ಮುಖಾಂತರ ಜೀವನ ಗುಣಮಟ್ಟ ಸೌಕರ್ಯ ಕುರಿತು ಸಮೀಕ್ಷೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬದೊಂದಿU ಮತಗಟ್ಟೆಗೆ ಬುಧವಾರ ಆಗಮಿಸಿ ಮತದಾನ ಮಾಡಿದರು. ಶಿಕಾರಿಪುರದಲ್ಲಿರುವ ಶ್ರೀ ಹುಚ್ಚರಾಯ ಸ್ವಾಮಿ ದೇಗುಲಕ್ಕೆ ಹಾಗೂ ಶ್ರೀ ರಾಘವೇಂದ್ರ ಸ್ವಾಮಿ […]
ಸುದ್ದಿ ಕಣಜ.ಕಾಂ ತೀರ್ಥಹಳ್ಳಿ: ಜನವರಿ ಹೊತ್ತಿಗೆ ಮಂಗನ ಕಾಯಿಲೆ ಮಲೆನಾಡಿಗೆ ಕಾಡುತ್ತಿತ್ತು. ಆದರೆ, ಈ ವರ್ಷ ಮಾರ್ಚ್ನಲ್ಲಿ ವರ್ಷದ ಮೊದಲ ಪ್ರಕರಣ ದೃಢಪಟ್ಟಿದೆ. ಇದನ್ನೂ ಓದಿ | ಇದುವರೆಗೆ ಎರಡು ಮಂಗನ ಕಾಯಿಲೆ […]