ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸೊಸೈಟಿಯಲ್ಲಿ ಅರ್ಜಿ ಸಲ್ಲಿಸಿದ ಒಂದು ಗಂಟೆಯೊಳಗೆ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ಗುಡವಿ ಪಕ್ಷಿಧಾಮ ಪುನಃಶ್ಚೇತನಕ್ಕೆ 11 ಸೂತ್ರ, ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ವರದಿಯಲ್ಲಿ ಏನಿದೆ?
ನಗರದ ಕುವೆಂಪು ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾ ಸರ್ಕಾರಿ ನೌಕರರ ಸಂಘ, ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ, ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಇವುಗಳ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.
ಈ ವರ್ಷ 40 ಕೋಟಿ ರೂಪಾಯಿ ವ್ಯವಹಾರ ನಡೆಸಲಾಗಿದೆ. ನೌಕರರಿಗಾಗಿ 22 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಸಮುದಾಯ ಭವನ ನಿರ್ಮಿಸಲಾಗುತ್ತಿದೆ. ನೌಕರರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.
ಜನವರಿ 1ರಿಂದ ಕೆಜಿಐಡಿ ಸಂಪೂರ್ಣ ಗಣಕೀಕರಣಗೊಳ್ಳಲಿದೆ. ಕೇಂದ್ರದ ಮಾದರಿಯ ವೇತನವನ್ನು ಮುಂದಿನ ದಿನಗಳಲ್ಲಿ ಪಡೆದೇ ಪಡೆಯುತ್ತೇವೆ. ಅಲ್ಲದೆ ಎನ್ಪಿಎಸ್ನ್ನು ರದ್ದುಗೊಳಿಸುವ ನಿಟ್ಟಿಲ್ಲಿ ಸರ್ಕಾರದೊಂದಿಗೆ ಮಾತುಕತೆ ನಡೆದಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.