ಸುದ್ದಿ ಕಣಜ.ಕಾಂ
ಶಿವಮೊಗ್ಗ: ಹಳೇ ಶಿವಮೊಗ್ಗದಲ್ಲಿ ಪ್ರತಿ ಬೀದಿಯಲ್ಲೂ ಪೊಲೀಸರ ಗಸ್ತು ಇದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಪೊಲೀಸ್ ಇಲಾಖೆ ವಹಿಸಿದೆ. ಜತೆಗೆ, ಗುರುವಾರ ಸಂಜೆ 6 ಗಂಟೆಯಿಂದ ಶುಕ್ರವಾರ ಬೆಳಗ್ಗೆವರೆಗೆ ಹೇರಲಾಗಿದ್ದ ಕರ್ಫ್ಯೂ ಅನ್ನು ಮುಂದುವರಿಸಲಾಗಿದೆ. ಹೀಗಾಗಿ, ಡಿಸೆಂಬರ್ 4ರಂದೂ ತುಂಗಾನಗರ, ಕೋಟೆ ಮತ್ತು ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶಗಳಲ್ಲಿ ಕರ್ಫ್ಯೂ ಮುಂದುವರಿಸಲಾಗಿದೆ.
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲ ಬಡಾವಣೆಗಳಲ್ಲಿ ನಿಷೇಧಾಜ್ಞೆ ಅನ್ವಯವಾಗಲಿದ್ದು, ಮೂರು ಠಾಣೆ ವ್ಯಾಪ್ತಿಯಲ್ಲಿ ಮಾತ್ರ ಕರ್ಫ್ಯೂ ಹೇರಲಾಗಿದೆ. ಹೀಗಾಗಿ, ಶಿವಮೊಗ್ಗ ನಗರದಲ್ಲಿ ಗುಂಪು ಸೇರುವುದು, ಮೆರವಣಿಗೆ ಇತ್ಯಾದಿಗಳ ಮೇಲೆ ಪೂರ್ಣ ನಿರ್ಬಂಧವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.