ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಾಚೇನಹಳ್ಳಿ ಕೈಗಾರಿಕಾ ವಲಯದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಷಯದಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೊದಲು ಬಂದ ಅಭ್ಯರ್ಥಿಗಳಿಗೆ ಪ್ರವೇಶಾವಕಾಶ ನೀಡಲಾಗುವುದು. ಪ್ರವೇಶಾತಿ ಮತ್ತು ಇತರೆ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ನಿದಿಗೆ, ಕೆ.ಐ.ಡಿ.ಬಿ. ಕೈಗಾರಿಕಾ ಪ್ರದೇಶ, ಶಿವಮೊಗ್ಗ ಇಲ್ಲಿಗೆ ಖುದ್ದಾಗಿ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08182-246054, ಮೊ.9141630313 ಸಂಪರ್ಕಿಸಿ.