ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ತಾಯಿಯ ಆರೈಕೆ ಮಾಡುತ್ತಿದ್ದ ಬಾಲಕಿಯನ್ನು ಊಟ ಕೊಡಿಸುವುದಾಗಿ ಹೇಳಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರ ಮನೋಜ್, ಪ್ರಜ್ವಲ್, ವಿನಯ್, ಸಂದೀಪ್ ಎಂಬುವವರನ್ನು ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಬಾಲಕಿಯ ಮೇಲೆ ನಡೀತು ಸಾಮೂಹಿಕ ಅತ್ಯಾಚಾರ
ಮನೋಜ್ ಮತ್ತವನ ಸ್ನೇಹಿತರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದು, ಇದರಲ್ಲಿ ಒಬ್ಬ ವಿದ್ಯಾರ್ಥಿಯಾಗಿದ್ದಾನೆ. ಇನ್ನುಳಿದವರು ಕೂಲಿ ಕೆಲಸ ಮತ್ತು ವೈನ್ ಶಾಪ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಾಲಕಿಯ ದೂರಿನನ್ವಯ ಆರೋಪಿಗಳನ್ನು ಬಂಧಿಸಲಾಗಿದೆ. ಇವೆರೆಲ್ಲ 22-23 ವಯಸ್ಸಿನವಾಗಿದ್ದಾರೆ ಎಂದು ಎಸ್.ಪಿ. ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.
ಭದ್ರಾವತಿಯಲ್ಲಿ ಚಿಕಿತ್ಸೆಗೆ ಬಂದಿದ್ದ ಯುವತಿ ಬಟ್ಟೆ ಬಿಚ್ಚುವಂತೆ ಹೇಳಿದ ವೈದ್ಯ
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಆರೋಪಿಗಳೆಲ್ಲ ಒಂದೇ ಬಡಾವಣೆಯವರಾಗಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಾಯಿಯು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಆಕೆಗೆ ಸಹಾಯ ಮಾಡಿದ್ದ ಮನೋಜ್ ಮೊದಲು ಬಾಲಕಿಯ ವಿಶ್ವಾಸಕ್ಕೆ ಪಾತ್ರನಾಗಿದ್ದಾನೆ. ನಂತರ, ಊಟಕ್ಕೆ ಕರೆದೊಯ್ದು ಕೃತ್ಯ ಎಸಗಿರುವುದಾಗಿ ತಿಳಿಸಿದ್ದಾರೆ.
ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರಿಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಅನ್ವಯ ಪ್ರಕರಣ ದಾಖಲಾಗಿದೆ.