ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲೂಕಿನ ಆಯನೂರು, ಕೊಹಳ್ಳಿ, ತುಪ್ಪೂರು, ಚೋರಡಿ, ಮಂಡಘಟ್ಟ, ತಮ್ಮಡಿಹಳ್ಳಿ, ಸಿರಿಗೆರೆ, ಅಗಸನಹಳ್ಳಿ ಗ್ರಾಮಗಳಲ್ಲಿ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಚುನಾವಣೆಯ ಪೂರ್ವ ತಯಾರಿ ಸಭೆ ನಡೆಸಿದರು.
ಹಳ್ಳಿಗಳ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡಿರುವ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ರತ್ನಾಕರ ಶೆಣೈ, ಕುಂಸಿ ಜಿಲ್ಲಾ ಪಂಚಾಯಿತಿ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಪದ್ಮಿನಿರಾವ್, ಜಿಲ್ಲಾ ಕಾರ್ಯದರ್ಶಿ ಕುಪೇಂದ್ರಪ್ಪ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯರಾಮ್ ನಾಯ್ಕ್, ತಾಲೂಕು ಪ್ರಧಾನ ಕಾರ್ಯದರ್ಶಿಯೂ ಆದ ತಾ.ಪಂ. ಸದಸ್ಯ ಗಿರೀಶ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಅರುಣ್, ಸಿಂಗಣಹಳ್ಳಿ ಸುರೇಶ್ ಉಪಸ್ಥಿತರಿದ್ದರು.