ಸುದ್ದಿ ಕಣಜ.ಕಾಂ
ಶಿವಮೊಗ್ಗ: ಗ್ರಾಮ ಪಂಚಾಯಿತಿ ಚುನಾವಣೆಗೆ ಕಾಂಗ್ರೆಸ್ ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇದಕ್ಕಾಗಿ ಜಿಲ್ಲಾಮಟ್ಟದ ಮೇಲ್ವಿಚಾರಣೆ ಸಮಿತಿ, ವಿಧಾನಸಭೆ ಕ್ಷೇತ್ರದ ಮಟ್ಟದ ವೀಕ್ಷಕರ ಸಮಿತಿ, ಬ್ಲಾಕ್ ಮಟ್ಟದ ವೀಕ್ಷಕರ ಸಮಿತಿ, ತಾಲ್ಲೂಕುಗಳ ಗ್ರಾಮಾಂತರ ಮಟ್ಟದ ಮೇಲ್ವಿಚಾರಣೆ ಸಮಿತಿಗಳನ್ನು ರಚಿಸಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ತಿಳಿಸಿದ್ದಾರೆ.
ಇದನ್ನೂ ಓದಿ | ಲೋಕಲ್ ಫೈಟ್ ವೇಳಾಪಟ್ಟಿ ಪ್ರಕಟ, ಮತದಾರರ ಸಂಖ್ಯೆ ಇಲ್ಲಿದೆ
ಜವಾಬ್ದಾರಿ: ವರಿಷ್ಠರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಶಾಸಕ ಆರ್.ಪ್ರಸನ್ನಕುಮಾರ್, ಮಂಜುನಾಥ ಭಂಡಾರಿ, ಬೇಳೂರು ಗೋಪಾಲಕೃಷ್ಣ, ಬಿ.ಕೆ.ಸಂಗಮೇಶ್ವರ್, ಕೆ.ಬಿ.ಪ್ರಸನ್ನಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ | 27 ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯಲ್ಲ
ಮಾಧ್ಯಮಗೋಷ್ಠಿಯಲ್ಲಿ ಪ್ರಮುಖರಾದ ರಾಮೇಗೌಡ, ಸಿ.ಎಸ್.ಚಂದ್ರಭೂಪಾಲ್, ಬಾಬು, ಚಂದನ್, ಸೌಗಂಧಿಕ, ತಿಮ್ಮಣ್ಣ, ಪ್ರವೀಣ್, ಸುರೇಂದ್ರ ಉಪಸ್ಥಿತರಿದ್ದರು.
ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಮತ್ತು ಕಾಂಗ್ರೆಸ್ ಅವಧಿಯಲ್ಲಿ ಮಾಡಲಾದ ಜನಪರ ಯೋಜನೆಗಳ ಕುರಿತು ಜನರಿಗೆ ತಿಳಿಹೇಳಲಾಗುವುದು.
– ಎಚ್.ಎಸ್.ಸುಂದರೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ