ಪಂಚಾಯಿತಿ ಫೈಟ್, ಬಿಜೆಪಿ ಆಡಳಿತ ವೈಫಲ್ಯವೇ ಕಾಂಗ್ರೆಸ್ ಸ್ಟ್ರೆಂಥ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಲೋಪಗಳು ಕುರಿತು ತಿಳಿಹೇಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು.
ಕಾಂಗ್ರೆಸ್ ಭವನದಲ್ಲಿ ಪಕ್ಷದ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿಜೆಪಿ ಆಡಳಿತದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯವೈಖರಿ ಆಡಳಿತ ವೈಫಲ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.
ಪ್ರತಿ ತಾಲ್ಲೂಕು ಮಟ್ಟ ಮತ್ತು ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಕಾಂಗ್ರೆಸ್ ಪ್ರಮುಖರನ್ನು ವೀಕ್ಷಕರನ್ನಾಗಿ ಮಾಡಲು, ಅಭಿವೃದ್ಧಿ ಕಾರ್ಯಗಳು ಕುಂಠಿತವಾದ ಬಗ್ಗೆ ಜನರಿಗೆ ತಿಳಿಸಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಂಘಟಿತ ಪ್ರಚಾರ ನಡೆಸಬೇಕೆಂದು ಕರೆ ನೀಡಿದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಂಘಟನೆ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಎಚ್.ಎಂ.ಚಂದ್ರಶೇಖರಪ್ಪ, ಶಾಂತವೀರಪ್ಪ ಗೌಡ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೀ.ನಾ. ಶ್ರೀನಿವಾಸ್, ಇಸ್ಮಾಯಿಲ್ ಖಾನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರಭೂಪಾಲ್, ಜಿ.ಪಂ. ಉಪಾಧ್ಯಕ್ಷೆ ವೇದಾ ವಿಜಯಕುಮಾರ್,ಸದಸ್ಯರಾದ ಕಲಗೋಡು ರತ್ನಾಕರ್, ಭೀಮನೇರಿ ಶಿವಪ್ಪ, ನರಸಿಂಗನಾಯ್ಕ, ರೇಖಾ ಉಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್, ಫಕೀರಪ್ಪ, ಆರ್.ಸಿ.ಪಾಟೀಲ್, ಅಣ್ಣಪ್ಪ, ಬಿ.ಜೆ. ನಾಗರಾಜ್, ರಾಘವೇಂದ್ರ ಉಪಸ್ಥಿತರಿದ್ದರು.

error: Content is protected !!