ರಾಜ್ಯದ 176 ತಾಲೂಕುಗಳ 285 ಕೇಂದ್ರಗಳಲ್ಲಿ ನಡೆಯಲಿದೆ ಗ್ರಾಪಂ ಸದಸ್ಯರಿಗೆ ಟ್ರೈನಿಂಗ್, ಹೇಗಿರಲಿದೆ ತರಬೇತಿ?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಇತ್ತೀಚೆಗೆ ಗ್ರಾಮ ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆಯ್ಕೆಯಾದ ರಾಜ್ಯದ ಎಲ್ಲ 92,131 ಸದಸ್ಯರಿಗೆ ಜನವರಿ 19ರಿಂದ ಮಾರ್ಚ್ 26ರ ವರೆಗೆ ಶಿವಮೊಗ್ಗದಲ್ಲಿ ತರಬೇತಿ ನೀಡಲಾಗುತ್ತಿದೆ.
ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಿಂದ ತರಬೇತಿ ನೀಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಬಿ.ಕೆ.ಶ್ರೀನಾಥ್, ಶಿವರಾಜ್,ಕೆ.ವಿ.ಅಣ್ಣಪ್ಪ ಸೇರಿದಂತೆ ಹಲವರಿದ್ದರು.

ಹೇಗಿರಲಿದೆ ತರಬೇತಿ

  • ಒಟ್ಟು 39 ದಿನಗಳ ಕಾಲ ತಾಲೂಕು ಹಂತದಲ್ಲಿ ಹತ್ತು ತಂಡಗಳಲ್ಲಿ ತರಬೇತಿ ನಡೆಯಲಿದೆ.
  • ರಾಜ್ಯದ 176 ತಾಲೂಕುಗಳ 285 ಕೇಂದ್ರಗಳಲ್ಲಿ ತರಬೇತಿ ನೀಡಲಿದ್ದು, ಕೆಲವು ತಾಲೂಕುಗಳಲ್ಲಿ 2 ಕೇಂದ್ರಗಳನ್ನು ಗುರುತಿಸಲಾಗಿದೆ.
  • ತರಬೇತಿ ನೀಡುವುದಕ್ಕಾಗಿ 900 ಸಂಪನ್ಮೂಲ ವ್ಯಕ್ತಿಗಳನ್ನು ಈಗಾಗಲೇ ನಿಯೋಜನೆ ಮಾಡಲಾಗಿದೆ. ಪ್ರತಿ ತಂಡದಲ್ಲಿ 40 ಸದಸ್ಯರಂತೆ ಐದು ದಿನಗಳ ಮುಖಾಮುಖಿ ತರಬೇತಿ ನೀಡಲಾಗುವುದು.
  • ನಿತ್ಯ ಬೆಳಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ತರಬೇತಿ ಅವಧಿಯಲ್ಲಿ 15 ವಿವಿಧ ವಿಷಯಾಧಾರಿತ ಅಧಿವೇಶನಗಳು, ಕೌಶಲ ಆಧಾರಿತ ಮಾಹಿತಿ ನೀಡಲಾಗುವುದು.
  • ಪ್ರತಿ ಅಧಿವೇಶನದಲ್ಲಿ ವಿಡಿಯೊ ಮೂಲಕ ವಿಷಯ ತಜ್ಞರಿಂದ ಮಾಹಿತಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಮತ್ತು ಗುಂಪು ಚರ್ಚೆ ಇನ್ನಿತರ ಕಾರ್ಯ ಚಟುವಟಿಕೆಗಳು ನಡೆಯಲಿವೆ. ಜತೆಗೆ, ಪ್ರತಿ ದಿನ ರಾಜ್ಯಮಟ್ಟದ ಹಿರಿಯ ಅಧಿಕಾರಿಗಳ ಜೊತೆ ಸಂವಾದ ಮತ್ತು ಪ್ರಶ್ನೋತ್ತರಕ್ಕೂ ಅವಕಾಶ ನೀಡಲಾಗುವುದು.
  • ಸದಸ್ಯರಿಗೆ ಪ್ರಯಾಣ ಭತ್ಯೆ ಮತ್ತು ಗ್ರಾಮ ಪಂಚಾಯಿತಿ ವತಿಯಿಂದ ಪ್ರತಿದಿನದ ಭಾಗವಹಿಸುವಿಕೆ ಭತ್ಯೆಯನ್ನು ನೀಡಲಾಗುವುದು.
  • ನೂತನ ಸದಸ್ಯರಿಗೆ, ಗ್ರಾಪಂ ರಚನೆ ಮತ್ತು ಸ್ವರೂಪ, ಯೋಜನೆಗಳು, ಸದಸ್ಯರ ಕರ್ತವ್ಯ ಮತ್ತು ಹೊಣೆಗಾರಿಕೆಗಳು, ವಾರ್ಡ್ ಮತ್ತು ಗ್ರಾಮಸಭೆ ಇನ್ನಿತರ ಸಭೆಗಳ ನಿರ್ವಹಣೆ, ಹಣಕಾಸು ಸಂಪನ್ಮೂಲ ಲಭ್ಯತೆ, ದೂರದೃಷ್ಟಿ ಮತ್ತು ಅಭಿವೃದ್ಧಿ ಯೋಜನೆಗಳನ್ನು ರೂಪಿಸುವ ಕುರಿತು ತಿಳಿಹೇಳಲಾಗುವುದು

KSEತರಬೇತಿಗೋಸ್ಕರ ಅಂದಾಜು 27.16 ಕೋಟಿ ರೂಪಾಯಿ ವೆಚ್ಚವಾಗದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ಇದನ್ನು ಭರಿಸಲಿದೆ. ತರಬೇತಿ ಪೂರ್ಣಗೊಂಡ ಒಂದು ತಿಂಗಳೊಳಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶುರುವಾಗಲಿದೆ. ಇದಾದ ನಂತರ, ಆಯ್ಕೆಯಾದವರಿಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಿಕೆ ಮತ್ತಿತರ ವಿಷಯಗಳ ಕುರಿತು ತರಬೇತಿ ನೀಡಲಾಗುವುದು
– ಕೆ.ಎಸ್.ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ

error: Content is protected !!