ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳದ್ದೇ ಜಯ, ಬಿಜೆಪಿ ವೈಫಲ್ಯವೇ ಕಾಂಗ್ರೆಸ್ ಸ್ಟ್ರೆಂಥ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ತಮ್ಮ ಅಧಿಕಾರ ಅವಧಿಯಲ್ಲಿ ಮಾಡಿರುವ ಸಾಧನೆಗಳ ಆಧಾರದ ಮೇಲೆ ಮತಯಾಚನೆ ಮಾಡಲಿದೆ. ವಿನಹ ಬಿಜೆಪಿಯಂತೆ ಜಾತಿ, ಧರ್ಮದ ಆಧಾರದ ಮೇಲೆ ಮತ ಕೇಳುವುದಿಲ್ಲ ಎಂದು ಟೀಕಿಸಿದರು.

ಕಿಮ್ಮನೆ ವಾಕ್ ಪ್ರಹಾರ

  • ಬಿಎಸ್‍ಎನ್‍ಎಲ್ ಸಾಯೋದಕ್ಕೆ ವಿಷ ನೀಡಿದ್ದೇ ಪ್ರಧಾನಿ ನರೇಂದ್ರ ಮೋದಿ
  • ದೇಶದ ಏಕತೆ, ಸಮಗ್ರತೆಗೆ ಬಿಜೆಪಿಯಿಂದ ತೊಂದರೆ ಇದೆ
  • ದೇಶದ ಮಾನಸಿಕ ಸ್ಥಿತಿಯನ್ನು ಬಿಜೆಪಿ ಹಾಳು ಮಾಡುತ್ತಿದೆ.
  • ಜನರು ಶಾಸಕಾಂಗದ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಈ ಹೊತ್ತಲ್ಲಿ ಮಾಧ್ಯಮಗಳ ಜವಾಬ್ದಾರಿ ಮುಖ್ಯ.
  • ಪ್ರಚೋದನಾಕಾರಿ ಹೇಳಿಕೆಗಳ ಮೂಲಕ ಸಮಾಜ ವಿಘಟನೆ ಮಾಡುತ್ತಿದೆ ಬಿಜೆಪಿ

ದೇಶದ ಬುನಾದಿಯಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಗೆಲುವು ಸಾಧಿಸಲಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ದೇಶದ ಐಕ್ಯತೆ ಮತ್ತು ಏಕಾಗ್ರತೆಗೆ ಬಿಜೆಪಿಯಿಂದ ಧಕ್ಕೆ ಆಗಲಿದೆ. ಬಿಜೆಪಿ ಮುಖಂಡರು ಉದ್ದೇಶಪೂರ್ವಕವಾಗಿಯೇ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ, ದೇಶದ ಮಾನಸಿಕ ಸ್ಥಿತಿ ಹಾಳಾಗುತ್ತಿದೆ ಎಂದು ಆರೋಪಿಸಿದರು.
ಮೇಲ್ಮನೆ ಕೋಲಾಹಲದ ಬಗ್ಗೆ ಕಿಮ್ಮನೆ ರತ್ನಾಕರ್ ಹೇಳಿದ್ದೇನು?
ಶಿವಮೊಗ್ಗ ಜಿಲ್ಲೆಯನ್ನು ಅಭಿವೃದ್ಧಿಪಡಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಹೀಗಾಗಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಲಿದೆ ಎಮದು ಹೇಳಿದರು.
ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಪ್ರಧಾನ ಕಾರ್ಯದರ್ಶಿ ಯು.ಶಿವಾನಂದ್, ಬಾಬು, ಪಾಲಿಕೆ ಪ್ರತಿಪಕ್ಷ ನಾಯಕ ಎಚ್.ಸಿ.ಯೋಗೇಶ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.

error: Content is protected !!