ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಂಕಷ್ಟ ಸಂದರ್ಭದಲ್ಲಿ ಸರ್ಕಾರಿ ನೌಕರರು ಶಕ್ತಿ ಮೀರಿ ಕರ್ತವ್ಯ ನಿರ್ವಹಿಸಿದ್ದೀರಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾ ಸರ್ಕಾರಿ ನೌಕರರ ಸಂಘ, ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ, ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಇವುಗಳ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ನೌಕರರಿಗೆ ಒಂದು ಗಂಟೆಯೊಳಗೆ 5 ಲಕ್ಷ ರೂ.ವರೆಗೆ ಸಾಲ
ಸರ್ಕಾರದ ಯೋಜನೆ ಜನಸಾಮಾನ್ಯರಿಗೆ ತಲುಪಿಸಿ: ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಕೊರೊನಾ ವಿಷಮ ಪರಿಸ್ಥಿತಿಯಲ್ಲಿಯೂ ನೌಕರ ವರ್ಗದವರು ಹಗಲು, ರಾತ್ರಿ ಎನ್ನದೇ ಕಾರ್ಯ ನಿರ್ವಹಿಸುತ್ತಿದ್ದಾರೆ. ನೌಕರ ವರ್ಗ ಸಲ್ಲಿಸಿದ ಸೇವೆಯಿಂದಾಗಿಯೇ ಕೊರೊನಾ ಮಹಾಮಾರಿಯನ್ನು ಹಿಮ್ಮೆಟ್ಟಿಸಲು ಸಾಧ್ಯವಾಗಿದೆ ಎಂದರು. ನೈಸರ್ಗಿಕ ವಿಕೋಪದ ಪರಿಸ್ಥಿತಿಯಲ್ಲಿ ಪರಿಸ್ಥಿತಿಯನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿಯೂ ನೌಕರರ ವರ್ಗ ಅತ್ಯಂತ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಿಡಿಯೋ ರಿಪೋರ್ಟ್: ಈ ವರ್ಷದಿಂದಲೇ ಶಾಲೆ, ಕಾಲೇಜುಗಳಲ್ಲಿ ಯೋಗ ತರಬೇತಿ ಆರಂಭಕ್ಕೆ ತೀರ್ಮಾನ
ಪ್ರತಿಭಟನೆ ದಾರಿ ತುಳಿಯಬೇಡಿ, ಸರ್ಕಾರ ನಿಮ್ಮೊಂದಿಗಿದೆ: ನಿಮ್ಮ ಬೇಡಿಕೆಗಳು ಏನೇ ಇದ್ದರೂ ಅವುಗಳನ್ನು ಈಡೇರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿಭಟನೆಯ ಹಾದಿಯನ್ನು ತುಳಿಯಬೇಡಿ. ಸರ್ಕಾರದೊಂದಿಗೆ ಮಾತುಕತೆ ನಡೆಸಿ, ಅವುಗಳ ಈಡೇರಿಕೆಗೆ ಪ್ರಯತ್ನಿಸಿ, ಸರ್ಕಾರ ಎಂದೆಂದಿಗೂ ನಿಮ್ಮೊಂದಿಗೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ತಮ್ಮ ಬೇಡಿಕೆಯ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದರು.
ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗೇಗೌಡ, ನೌಕರರ ಸಂಘದ ಜಿಲ್ಲಾ ಪ್ರಮುಖರಾದ ಕೆ.ಎಂ.ಶಾಂತರಾಜು, ಮೋಹನ್ಕುಮಾರ್, ಮಾರುತಿ ಇತರರಿದ್ದರು.