ಮುಕ್ತ ವಿವಿ ಪ್ರವೇಶಾತಿ ದಿನಾಂಕ ವಿಸ್ತರಣೆ, ಯಾವ ಕೋರ್ಸ್ ಲಭ್ಯ, ಅಂತಿಮ ದಿನ ಯಾವುದು ಗೊತ್ತಾ?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಸಕ್ತ 2020-21ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ.
ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ, ಬಿ.ಕಾಂ, ಎಂ.ಎ, ಎಂ.ಸಿ.ಜೆ, ಎಂ.ಕಾಂ., ಎಂ.ಬಿ.ಎ., ಬಿ.ಎಲ್.ಐ.ಎಸ್.ಸಿ, ಎಂ.ಎಲ್.ಐ.ಎಸ್.ಸಿ., ಎಂಎಸ್.ಸಿ, ಪಿ.ಜಿ. ಡಿಪ್ಲೋಮಾ ಪ್ರೋಗ್ರಾಂ, ಡಿಪ್ಲೋಮಾ ಪ್ರೋಗ್ರಾಂ, ಸರ್ಟಿಫಿಕೇಟ್ ಪ್ರೋಗ್ರಾಂಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿಸೆಂಬರ್ 31ರ ವರೆಗೆ ವಿಸ್ತರಿಸಲಾಗಿದೆ.

ಈ ಕೋರ್ಸ್‍ಗಳ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ದಂಡ ಶುಲ್ಕವಿಲ್ಲದೆ ಡಿಸೆಂಬರ್ 31ರ ವರೆಗೆ ವಿಸ್ತರಿಸಲಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇಕಡ 25ರಷ್ಟು ವಿನಾಯಿತಿ ನೀಡಲಾಗುವುದು. ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳಿಗೆ ಸೂಕ್ತ ದಾಖಾಲಾತಿಯೊಂದಿಗೆ ಶುಲ್ಕ ವಿನಾಯತಿ ಅಡಿ ಪ್ರವೇಶಾತಿ ನೀಡಲಾಗುವುದು.

ಎಲ್ಲ ಸರ್ಕಾರಿ ರಜೆಗಳಲ್ಲೂ ಪ್ರವೇಶಾತಿಗೆ ಅವಕಾಶ ಇರುತ್ತದೆ ಎಂದು ಶಿವಮೊಗ್ಗದ ಪ್ರಾದೇಶಿಕ ನಿರ್ದೇಶಕ ಡಾ. ಮೋಹನ್‍ರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-250367 ಅಥವಾ ವೆಬ್‍ಸೈಟ್ http://www.ksoumysuru.ac.in ಸಂಪರ್ಕಿಸಬಹುದು.

error: Content is protected !!