ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2020-21ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ವಿವಿಯ ಶಿವಮೊಗ್ಗ ಪ್ರಾದೇಶಿಕ ನಿರ್ದೇಶಕ ಎಚ್.ಎಲ್.ಮೋಹನ್ ರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ನಾತಕ, ಸ್ನಾತಕೋತ್ತರ ಕೋರ್ಸ್’ಗಳಾದ ಬಿ.ಎ, ಬಿ.ಕಾಂ, ಎಂ.ಎ, ಎಂ.ಸಿ.ಜೆ, ಎಂ.ಕಾಂ., ಎಂ.ಬಿ.ಎ., ಬಿ.ಎಲ್.ಐ.ಎಸ್ಸಿ, ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಂ, ಡಿಪ್ಲೋಮಾ ಪ್ರೋಗ್ರಾಂ, ಸರ್ಟಿಫಿಕೇಟ್ ಪ್ರೋಗ್ರಾಂಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.
ಈ ಕೋರ್ಸ್’ಗಳ ಪ್ರಥಮ ವರ್ಷದ ಪ್ರವೇಶಾತಿಗೆ ದಂಡ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಅಂತಿಮ ದಿನವಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ.25ರಷ್ಟು ವಿನಾಯಿತಿ ನೀಡಲಾಗುವುದು.
ಎಸ್.ಸಿ., ಎಸ್.ಟಿ ವಿದ್ಯಾರ್ಥಿಗಳಿಗೆ ಸೂಕ್ತ ದಾಖಾಲಾತಿಯೊಂದಿಗೆ ಶುಲ್ಕ ವಿನಾಯಿತಿ ಅಡಿ ಪ್ರವೇಶಾತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ, 08182 250367, 9164467131 ಇಲ್ಲವೇ ವೆಬ್ ಸೈಟ್ http://www.ksoumysuru.ac.in ಸಂಪರ್ಕಿಸಬಹುದು.