ಸುದ್ದಿ ಕಣಜ.ಕಾಂ
ಬೆಂಗಳೂರು: ನಗರದಲ್ಲಿ ಮಂಗಳವಾರವೊಂದೇ ದಿನ 17 ಪ್ರಕರಣ ಹಾಗೂ ಬುಧವಾರ 1 ಪ್ರಕರಣ ಕಂಡುಬಂದಿದ್ದು, ಬೆಂಗಳೂರಿನಲ್ಲಿ ಪ್ರಸಕ್ತ 18 ಮಂದಿಗೆ ಸೋಂಕು ದೃಢಪಟ್ಟಿದೆ.
ಶಾಲೆಗೆ ಬರುವಾಗ ಪೋಷಕರ ಲಿಖಿತ ಪತ್ರ ತನ್ನಿ!
54 ಪ್ರಾಥಮಿಕ ಸಂಪರ್ಕಿತರು ಹಾಗೂ 92 ದ್ವಿತೀಯ ಸಂಪರ್ಕಿತರು ಪತ್ತೆಯಾಗಿದ್ದಾರೆ. ಸೋಂಕು ದೃಢಪಟ್ಟವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪಾಲಿಕೆಯು ಪತ್ತೆ ಹಚ್ಚಿ ಹೋಟೆಲ್, ರೆಸಿಡೆನ್ಸಿಗಳಲ್ಲಿ ಸಾಂಸ್ಥಿಕ ದಿಗ್ಬಂಧನದಲ್ಲಿ ಇರಿಸಿದೆ.
ಒಂದೇ ಕುಟುಂಬದ ನಾಲ್ವರಲ್ಲಿ ರೂಪಾಂತರ ಕೊರೊನಾ
ಬೊಮ್ಮನಹಳ್ಳಿ ವಲಯದ ಅಪಾರ್ಟ್ ಮೆಂಟ್ ನಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ. ಅಪಾರ್ಟ್ ಮೆಂಟ್ ನಲ್ಲಿಯೇ 33 ಮಂದಿಯನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ.