ಸುದ್ದಿ ಕಣಜ.ಕಾಂ
ಶಿವಮೊಗ್ಗ/ಬೆಂಗಳೂರು: ಹೊಸ ವರ್ಷ ಆಚರಣೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆದರೆ, ಕೊರೊನಾ ಹಿನ್ನೆಲೆ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ವಿಧಿಸಿದೆ. ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಇವುಗಳಿಗೆ ನಿಷೇಧ
- ಸಾಮಾಜಿಕ ಅಂತರವನ್ನು ಕಾಪಾಡುವ ದೃಷ್ಟಿಯಿಂದ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕ್ಲಬ್, ಪಬ್, ರೆಸ್ಟೋರೆಂಟ್ ಇತ್ಯಾದಿ ಪ್ರದೇಶಗಳಲ್ಲಿ ವಿಶೇಷ ಡಿಜೆ ಡ್ಯಾನ್ಸ್ ಕಾರ್ಯಕ್ರಮಗಳು, ವಿಶೇಷ ಪಾರ್ಟಿಗಳಿಗೆ ಬ್ರೇಕ್
- ಸಾರ್ವಜನಿಕ ಸ್ಥಳ, ಮುಖ್ಯ ರಸ್ತೆಗಳಲ್ಲಿ ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಒಂದುಗೂಡುವುದಕ್ಕೆ ನಿರ್ಬಂಧ
- 65 ವರ್ಷ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದ ಒಳಗಿನ ಮಕ್ಕಳು ಕಡ್ಡಾಯವಾಗಿ ಮನೆಯಲ್ಲಿಯೇ ಇರಬೇಕು.
- ಸಾರ್ವಜನಿಕ ಸ್ಥಳಗಳಲ್ಲಿ ತಪ್ಪದೇ ಮಾಸ್ಕ್ ಧರಿಸಬೇಕು.
- ಹೋಟೆಲ್, ಮಾಲ್ ಮುಂತಾದ ಕಡೆ ಥರ್ಮಲ್ ಸ್ಕ್ರೀನಿಂಗ್ ಮತ್ತು ಸ್ಯಾನಿಟೈಸರ್ ವ್ಯವಸ್ಥೆ ಕಡ್ಡಾಯ
- ಸಾಮಾಜಿಕ ಅಂತರವನ್ನು ಖಾತ್ರಿಪಡಿಸಲು ಅಗತ್ಯವಿದ್ದರೆ, ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್ಲೈನ್ ಮುಖಾಂತರ ಸ್ಥಳ ಕಾಯ್ದಿರಿಸಲು ವ್ಯವಸ್ಥೆ ಮಾಡಬೇಕು.
- ಪ್ರಾಂಗಣ, ಉಪಾಹಾರ ಗೃಹ ಮತ್ತು ವ್ಯವಸ್ಥಿತ ಕಟ್ಟಡ ಸಮುಚ್ಚಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
- ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕು.
- ಪ್ರತಿನಿತ್ಯದ ವ್ಯವಹಾರ ನಡೆಸಲು ಯಾವುದೇ ನಿಬರ್ಂಧವಿರುವುದಿಲ್ಲ. ಈ ನಿಬರ್ಂಧ ಜನವರಿ 2ರವರೆಗೆ ಮುಂದುವರೆಯಲಿದೆ ಎಂದು ಅವರು ಹೇಳಿದ್ದಾರೆ.
ಕೋವಿಡ್ ಮಾರ್ಗಸೂಚಿ ಅನ್ವಯ ಹೊಸ ವರ್ಷ ಆಚರಣೆಗೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಹೀಗಾಗಿ, ಕಡ್ಡಾಯವಾಗಿ ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಬೇಕು. ಕೊರೊನಾ ಹಿನ್ನೆಲೆ ಎಲ್ಲರೂ ಸಹಕಾರ ನೀಡಬೇಕು.
– ಕೆ.ಬಿ.ಶಿವಕುಮಾರ್, ಜಿಲ್ಲಾಧಿಕಾರಿ