ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿಯು ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣೆ ಕೇಂದ್ರದಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ. ಹೀಗಾಗಿ, ಡಿಸೆಂಬರ್ 20ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಗ್ರಾಮೀಣ ಉಪ ವಿಭಾಗದ ಎಇಇ ಪ್ರಕಟಣೆಯಲ್ಲಿ ಕೋರಿದ್ದಾರೆ.