ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿಯು ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣೆ ಕೇಂದ್ರದಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ. ಹೀಗಾಗಿ, ಡಿಸೆಂಬರ್ 20ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಗ್ರಾಮೀಣ ಉಪ ವಿಭಾಗದ ಎಇಇ ಪ್ರಕಟಣೆಯಲ್ಲಿ ಕೋರಿದ್ದಾರೆ.
ಇಲ್ಲಿ ವಿದ್ಯುತ್ ವ್ಯತ್ಯಯ: ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೊನಿ, ವೀರಭದ್ರ ಕಾಲೊನಿ, ಹಸೂಡಿ, ಹಸೂಡಿ ಫಾರಂ, ಯಲವಟ್ಟಿ ಮತ್ತು ಜಯಂತಿಗ್ರಾಮ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ನಂಜುಂಡೇಶ್ವರ ರೈಸ್ ಮಿಲ್, ಕೆಎಸ್ಆರ್ಪಿ ಕಾಲೊನಿ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ನಿದಿಗೆ ಕೈಗಾರಿಕಾ ಪ್ರದೇಶ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರೆಂಟ್ ಕಟ್ ಆಗಲಿದೆ.