ನಿಷೇಧಾಜ್ಞೆ ವಿರೋಧದ ಬಗ್ಗೆ ಸಂಸದರು ಹೇಳಿದ್ದೇನು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋಮು ಗಲಭೆಯಿಂದಾಗಿ ನಗರದಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯ ಬಗ್ಗೆ ಹಲವರಿಂದ ವಿರೋಧ ವ್ಯಕ್ತವಾಗಿದ್ದು, ಈ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಯಾವುದೇ ರೀತಿಯ ಅಹಿತಕರ ಘಟನೆ, ಗಲಾಟೆಗೆ ಅವಕಾಶ ನೀಡಬಾರದೆಂಬ ಉದ್ದೇಶಕ್ಕಾಗಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಪೊಲೀಸ್ ಇಲಾಖೆ ಗುಪ್ತಚರ ವರದಿ ಆಧರಿಸಿ ಕೆಲಸ ಮಾಡುತ್ತದೆ ಎಂದು ಹೇಳಿದರು.

error: Content is protected !!