ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಇಂದು, ಮತ ಎಣಿಕೆಗೆ ಕೈಗೊಂಡ ಸಿದ್ಧತೆಗಳೇನು, ಎಲ್ಲೆಲ್ಲಿ ನಡೆಯಲಿದೆ ಮತ ಎಣಿಕೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27ರಂದು ನಡೆದಿದ್ದ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಡಿಸೆಂಬರ್ 30ರಂದು ಬೆಳಗ್ಗೆ 8 ಗಂಟೆಯಿಂದ ಆಯಾ ತಾಲೂಕುಗಳ ಕೇಂದ್ರ ಸ್ಥಳದಲ್ಲಿ ನಡೆಯಲಿದೆ. ಇದಕ್ಕಾಗಿ ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಎಲ್ಲೆಲ್ಲಿ ಮತ ಎಣಿಕೆ

  • ಶಿವಮೊಗ್ಗ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತ ಎಣಿಕೆಯು ನಗರದ ಎಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜು
  • ಭದ್ರಾವತಿ ತಾಲೂಕಿನ ಸಂಚಿ ಹೊನ್ನಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜು
  • ತೀರ್ಥಹಳ್ಳಿ ತಾಲೂಕಿನ ಡಾ. ಯು.ಆರ್.ಅನಂತಮೂರ್ತಿ ಸರ್ಕಾರಿ ಪ್ರೌಢ ಶಾಲೆ
  • ಸೊರಬ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
  • ಹೊಸನಗರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು
  • ಶಿಕಾರಿಪುರ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
  • ಸಾಗರ ತಾಲೂಕಿನ ಬಿ.ಎಚ್.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು

ಮಾಡಿಕೊಂಡಿರುವ ವ್ಯವಸ್ಥೆ ಏನು, ತಾಲೂಕುವಾರು ಮಾಹಿತಿ: ಶಿವಮೊಗ್ಗ ತಾಲೂಕಿನ 40 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 70 ಎಣಿಕೆ ಮೇಲ್ವಿಚಾರಕರು, 140 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 172 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 70ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ಭದ್ರಾವತಿ ತಾಲೂಕಿನ 35 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 75 ಎಣಿಕೆ ಮೇಲ್ವಿಚಾರಕರು ಹಾಗೂ 150 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 154 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 75 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗದ ಉಪವಿಭಾಗಾಧಿಕಾರಿ ಪ್ರಕಾಶ್ ಟಿ.ವಿ. ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಜಿಲ್ಲೆಯ ಒಟ್ಟು 244 ಗ್ರಾಮ ಪಂಚಾಯಿತಿಗಳ 2609 ಸ್ಥಾನಗಳಿಗೆ 6973 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದು, ಈ ಪೈಕಿ 155 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ 2450 ಮಂದಿಯ ಆಯ್ಕೆ ನಾಳೆ ನಡೆಯಲಿದೆ. ಅಲ್ಲದೆ ಯಾವುದೇ ನಾಮಪತ್ರ ಸಲ್ಲಿಕೆಯಾಗದಿರುವುದರಿಂದ ಶಿವಮೊಗ್ಗ ತಾಲೂಕಿನ 2, ಸಾಗರ ಮತ್ತು ಶಿಕಾರಿಪುರ ತಾಲೂಕಿನ ತಲಾ ಒಂದು ಸ್ಥಾನ ಸೇರಿದಂತೆ ಒಟ್ಟು 4 ಸ್ಥಾನಗಳು ಉಳಿದಿವೆ.

ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 57 ಎಣಿಕೆ ಮೇಲ್ವಿಚಾರಕರು ಹಾಗೂ 114 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 169 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 57ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗದ ಅರಣ್ಯ ವ್ಯವಸ್ಥಾಪನಾಧಿಕಾರಿ ನಫೀಸಾ ಬೇಗಂ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ಸಾಗರ ತಾಲೂಕಿನ 35 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 66 ಎಣಿಕೆ ಮೇಲ್ವಿಚಾರಕರು ಹಾಗೂ 132 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 244 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 66 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಸಾಗರದ ಉಪವಿಭಾಗಾಧಿಕಾರಿ ಪ್ರಸನ್ನ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ಶಿಕಾರಿಪುರ ತಾಲೂಕಿನ 39 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 60 ಎಣಿಕೆ ಮೇಲ್ವಿಚಾರಕರು ಹಾಗೂ 120 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 165 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 60ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮೂಕಪ್ಪ ಎಂ.ಕರಭೀಮಣ್ಣನವರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ಸೊರಬ ತಾಲೂಕಿನ 27 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 45ಎಣಿಕೆ ಮೇಲ್ವಿಚಾರಕರು ಹಾಗೂ 90ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 137ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 45ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್ ಎಚ್.ಕೆ. ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ಹೊಸನಗರ ತಾಲೂಕಿನ 30 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 60ಎಣಿಕೆ ಮೇಲ್ವಿಚಾರಕರು ಹಾಗೂ 120ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 151ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 60ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಧರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ಒಟ್ಟು ಜಿಲ್ಲೆಯ 244 ಗ್ರಾಮ ಪಂಚಾಯಿತಿಗಳ 1192 ಚುನಾವಣಾ ಕ್ಷೇತ್ರಗಳಿಗೆ 433 ಟೇಬಲ್‍ಗಳನ್ನು ಸಜ್ಜುಗೊಳಿಸಲಾಗಿದೆ. 433 ಜನ ಎಣಿಕೆ ಮೇಲ್ವಿಚಾರಕರನ್ನು ಹಾಗೂ 866 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ.
ಶಿವಮೊಗ್ಗ ತಾಲೂಕಿನ 40 ಗ್ರಾಮ ಪಂಚಾಯಿತಿಗಳ 457 ಸ್ಥಾನಗಳಿಗೆ 1374 ಮಂದಿ ಅಂತಿಮವಾಗಿ ಕಣದಲ್ಲಿದ್ದಾರೆ. ಅವರನ್ನು 24 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭದ್ರಾವತಿ ತಾಲೂಕಿನ 35 ಗ್ರಾಮ ಪಂಚಾಯಿತಿಗಳ 419 ಸ್ಥಾನಗಳಿಗೆ 1070 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 44 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯಿತಿಗಳ 336 ಸ್ಥಾನಗಳಿಗೆ 840 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 14 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಾಗರ ತಾಲೂಕಿನ 35 ಗ್ರಾಮ ಪಂಚಾಯಿತಿಗಳ 370ಸ್ಥಾನಗಳಿಗೆ 1008 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 30 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಿಕಾರಿಪುರ ತಾಲೂಕಿನ 39ಗ್ರಾಮ ಪಂಚಾಯಿತಿಗಳ 428ಸ್ಥಾನಗಳಿಗೆ 1064 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 20 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೊರಬ ತಾಲೂಕಿನ 27 ಗ್ರಾಮ ಪಂಚಾಯಿತಿಗಳ 304 ಸ್ಥಾನಗಳಿಗೆ 829 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದು, ಆ ಪೈಕಿ 16 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹೊಸನಗರ ತಾಲೂಕಿನ 30 ಗ್ರಾಮ ಪಂಚಾಯಿತಿಗಳ 395 ಸ್ಥಾನಗಳಿಗೆ 788 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದು, 7 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

error: Content is protected !!